ನೈಟ್ ಕರ್ಪ್ಯೂನಿಂದ ಧಾರ್ಮಿಕ ಆಚರಣೆಗೆ ತೊಂದರೆ: ಕರ್ಪ್ಯೂನಿಂದ ಉಡುಪಿ, ಮಣಿಪಾಲಕ್ಕೆ ವಿನಾಯಿತಿ ನೀಡುವಂತೆ ಸಿಎಂಗೆ ಶಾಸಕ ರಘುಪತಿ ಭಟ್ ಮನವಿ
ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ದೈವಸ್ಥಾನಗಳ ನೇಮೋತ್ಸವ, ದೇವಸ್ಥಾನಗಳ ಉತ್ಸವ, ಯಕ್ಷಗಾನ ಹಾಗೂ ಆರ್ಥಿಕತೆಗೆ ಹೊಡೆತ ಬೀಳುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಣಿಪಾಲಕ್ಕೆ ವಿಧಿಸಿರುವ ರಾತ್ರಿ ಕರ್ಫ್ಯೂ ಅನ್ನು ಹಿಂಪಡೆಯಬೇಕೆಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಭಾಗದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ರಾತ್ರಿಯ ವೇಳೆ ನಡೆಯುತ್ತವೆ. ಕಳೆದ ಬಾರಿಯು ಕೋವಿಡ್ […]