ಮುಂಬರುವ ದಿನಗಳಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನಗಳು ಲಭಿಸಲಿವೆ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದು, ಅದರ ಫಲವಾಗಿ ಮುಂಬರುವ ದಿನಗಳಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನಗಳು ಲಭಿಸಲಿವೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಹರ್ಷ ವ್ಯಕ್ತಪಡಿಸಿದರು. ಅವರು ಶುಕ್ರವಾರ ನಗರದ ತುಳು ಭವನದಲ್ಲಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 360 ಲಕ್ಷ ರೂ.ಗಳ ಅನುದಾನದಿಂದ ನಿರ್ಮಿಸಲಾದ ತುಳುಭವನದ ಹೆಚ್ಚುವರಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು […]