ಎರಡನೇ ರಾಜ್ಯ ಭಾಷೆಯಾಗಿ ತುಳು; ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚನೆ: ಶಿವರಾಜ ತಂಗಡಗಿ

ಬೆಂಗಳೂರು: ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳುವನ್ನು ಪರಿಗಣಿಸಲು ಅಗತ್ಯ ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು. ಪರಿಷತ್ತಿನಲ್ಲಿ ಜೆಡಿಎಸ್‌ನ ಬಿ.ಎಂ.ಫಾರೂಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ, ವರದಿ ನೀಡಲು ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ಹಿಂದೆ ಸಮಿತಿ ರಚಿಸಲಾಗಿತ್ತು. ತುಳು ಭಾಷೆಯ ಸ್ವರೂಪ, ಇತಿಹಾಸ, ಸಾಹಿತ್ಯ, ಪರಂಪರೆ, ಲಿಪಿ, ಶಾಸನಗಳ […]