ಟಿ ಟ್ವೆಂಟಿ: ಆಸೀಸ್ ವಿರುದ್ಧ ಭಾರತಕ್ಕೆ ರೋಚಕ ಜಯ

ಕ್ಯಾನ್‌ಬೆರಾ: ಇಲ್ಲಿನ ಮನುಕಾ ಓವಲ್‌ ಮೈದಾನದಲ್ಲಿ ಇಂದು ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 11 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ದಾಖಲಿಸಿದೆ. ಬದಲಿ ಆಟಗಾರ ಯಜುವೇಂದ್ರ ಚಹಲ್ ಹಾಗೂ ಡೆಬ್ಯು ವೇಗಿ ಟಿ ನಟರಾಜನ್ ಪರಿಣಾಮಕಾರಿ ಪ್ರದರ್ಶನ ತೋರುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, […]