ಕಾನೂನು ರಕ್ಷಣೆ ಕಳೆದುಕೊಳ್ಳುವ ಭೀತಿಯಲ್ಲಿ ಟ್ವಿಟರ್.!
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಟ್ವಿಟರ್ ಭಾರತ ದೇಶದಲ್ಲಿ ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳನ್ನು ಪಾಲಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಮಧ್ಯವರ್ತಿ ಮಾಧ್ಯಮ ಸ್ಥಾನಮಾನ ಕಳೆದುಕೊಳ್ಳುವ ಆತಂಕದಲ್ಲಿದೆ ಎಂದು ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ. ನಿಗದಿತ ಅವಧಿಯೊಳಗೆ ಸರ್ಕಾರದ ನಿಯಮಗಳಿಗೆ ಬದ್ಧತೆ ತೋರದಿದ್ದರೆ ಬಳಕೆದಾರರು ವಿಷಯಗಳನ್ನು ಅಥವಾ ಸಂದೇಶಗಳನ್ನು ಪ್ರಕಟಿಸುವ ಒಂದು ಮಧ್ಯವರ್ತಿಯಾಗಿ ಟ್ವಿಟರ್ ಅನ್ನು ಪರಿಗಣಿಸಲಾಗುವುದಿಲ್ಲ. ಬದಲಿಗೆ, ಯಾವುದೇ ಬಳಕೆದಾರರು ಪ್ರಕಟಿಸುವ ಎಲ್ಲ ಪೋಸ್ಟ್‌ಗಳಿಗೆ ಸ್ವತಃ ಟ್ವಿಟರ್ ಹೊಣೆಗಾರಿಕೆ ವಹಿಸಬೇಕಾಗುತ್ತದೆ. ಟ್ವಿಟರ್, ಹೊಸ ನಿಯಮಗಳಿಗೆ […]