ಎರಡೂವರೆ ವರ್ಷದ ಮಗು ಅಪಹರಣ ಪ್ರಕರಣ: ಕುಮಟಾದಲ್ಲಿ ಆರೋಪಿಯ ಸೆರೆ, ಮಗುವಿನ ರಕ್ಷಣೆ
ಉಡುಪಿ: ಇಲ್ಲಿನ ಕರಾವಳಿ ಬೈಪಾಸ್ ಬಳಿ ಭಾನುವಾರ ಬೆಳಿಗ್ಗೆ ಅಪಹರಣಕ್ಕೆ ಒಳಗಾದ ಮಗುವನ್ನು ಉಡುಪಿ ಪೊಲೀಸರು ರಕ್ಷಣೆ ಮಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಕುಮಟಾ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಿನ್ನೆ ರಾತ್ರಿಯೇ ಆರೋಪಿ ಬಾಗಲಕೋಟೆಯ ಪರಶು ಎಂಬಾತನನ್ನು ಬಂಧಿಸಿದ್ದಾರೆ. ಆತನ ಬಳಿಯಿದ್ದ ಮಗು ಶಿವರಾಜ್ (2.4 ವರ್ಷ) ಅನ್ನು ಪೊಲೀಸರು ರಕ್ಷಿಸಿದ್ದು, ಮಗು ಮತ್ತು ಆರೋಪಿಯನ್ನು ಇಂದು ಬೆಳಿಗ್ಗೆ ಪೊಲೀಸರು ಉಡುಪಿಗೆ ಕರೆ ತರಲಿದ್ದಾರೆ ಎಂದು ತಿಳಿದುಬಂದಿದೆ.