ಗಂಗೊಳ್ಳಿ: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಸಿಲುಕಿ ಎರಡು ದನಗಳು ಸಾವು

ಗಂಗೊಳ್ಳಿ: ರಸ್ತೆಗೆ ಅಡ್ಡ ಬಂದ ದನಗಳನ್ನು ರಕ್ಷಿಸಲು ಹೋಗಿ ಲಾರಿಯೊಂದು ಹೆದ್ದಾರಿ ಮಧ್ಯದ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳಿಕಟ್ಟೆ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಲಾರಿಯ ಚಕ್ರದಡಿಗೆ ಸಿಲುಕಿ ಎರಡು ದನಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಲಾರಿ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಕುಂದಾಪುರದಿಂದ ಬೈಂದೂರು ಕಡೆ ತೆರಳುತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.