ಕರಾವಳಿ ಸಹಿತ ರಾಜ್ಯಾದ್ಯಂತ ಎರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ: ಕರಾವಳಿ ಸಹಿತ ರಾಜ್ಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬುಧವಾರ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿಯಲ್ಲಿ ಮುಂದುವರಿದ ಮಳೆ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ […]