ಮಧ್ಯರಾತ್ರಿ ಹೊತ್ತು ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣ ಕೃಪೆಗೆ ಪಾತ್ರರಾದ ಯು.ಟಿ.ಖಾದರ್

ಉಡುಪಿ: ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಜನ್ಮಾಷ್ಟಮಿಯ ಸಂದರ್ಭದಲ್ಲಿ ಮಧ್ಯರಾತ್ರಿಯ ಹೊತ್ತು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಜಗದ್ಗುರುವಿನ ಕೃಪೆಗೆ ಪಾತ್ರರಾಗಿದ್ದಾರೆ. ಬುಧವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿ ಮಂಗಳೂರಿನಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯ ಕಡಿಯಾಳಿಯಲ್ಲಿ ಪ್ರಸಾದ್ ಕಾಂಚನ್ ನೇತೃತ್ವದಲ್ಲಿ ಶಶಿರಾಜ್ ಕುಂದರ್ ಮತ್ತು ತಂಡದಿಂದ ಟೈಗರ್ ಫ್ರೆಂಡ್ಸ್ ನ ಹುಲಿವೇಷ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಅವರು ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. […]

ಸದನದಿಂದ ಅಮಾನತು ಶಿಕ್ಷೆ ನೀಡಿದ ಸಭಾಧ್ಯಕ್ಷರಿಗೆ ಪತ್ರ ಬರೆದ ಕಾರ್ಕಳ ಶಾಸಕ ಸುನಿಲ್ ಕುಮಾರ್

ಬೆಂಗಳೂರು: ಸರ್ಕಾರದ ನಡೆಯನ್ನು ಪ್ರಶ್ನಿಸಿದ ಬಿಜೆಪಿ ನಾಯಕರನ್ನು ಅಮಾನತುಗೊಳಿಸಿದ ಸಭಾಧ್ಯಕ್ಷ ಯುಟಿ ಖಾದರ್ ಅವರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪತ್ರ ಬರೆದಿದ್ದಾರೆ. ಶ್ರೀ ಯು.ಟಿ.ಖಾದರ್ ಸನ್ಮಾನ್ಯ ಸಭಾಧ್ಯಕ್ಷರು ವಿಧಾನಸಭೆ ವಿಷಯ: ಏಕಪಕ್ಷೀಯವಾಗಿ ಅಮಾನತು ಶಿಕ್ಷೆಕೊಟ್ಟದ್ದಕ್ಕಾಗಿ ಧನ್ಯವಾದ ಸಮರ್ಪಣೆ ಮಾನ್ಯ ಸಭಾಧ್ಯಕ್ಷರೇ , ನಿಮ್ಮಿಂದ ನಾವು ಇಂಥದೊಂದು ನಡೆಯನ್ನು ನಿರೀಕ್ಷಿಸಿರಲಿಲ್ಲ. ಸಭಾಧ್ಯಕ್ಷ ಪೀಠದ ಮೇಲೆ ಕುಳಿತು ಎಲ್ಲರನ್ನೂ ಸಮಾನರೆಂದು ಪರಿಗಣಿಸಿ ಪ್ರಜಾಪ್ರಭುತ್ವದ ಮೌಲ್ಯವನ್ನು ಖಾದರ್ ಸಮರ್ಥವಾಗಿ ಎತ್ತಿ ಹಿಡಿಯಬಹುದೆಂಬ ನಮ್ಮ‌ನಿರೀಕ್ಷೆ ಇಂದು ಉಸುಕಿನ ಸೌಧದಂತೆ ಕುಸಿದು ಹೋಗಿದೆ. […]

ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಆಯ್ಕೆ: ನಾಳೆ ಚುನಾವಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಅವರನ್ನು ಅಂತಿಮಗೊಳಿಸಲಾಗಿದೆ. ಪ್ರಸ್ತುತ ಆರ್.ವಿ.ದೇಶಪಾಂಡೆ ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಗದಗ ಶಾಸಕ ಎಚ್‌ಕೆ ಪಾಟೀಲ್, ಶಿರಾ ಶಾಸಕ ಟಿಬಿ ಜಯಚಂದ್ರ, ಮಧುಗಿರಿ ಶಾಸಕ ಕೆಎನ್ ರಾಜಣ್ಣ, ಮುದ್ದೇಬಿಹಾಳ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ಸೇರಿದಂತೆ ಹಲವು ಹಿರಿಯ ಶಾಸಕರ ಹೆಸರನ್ನು ಪರಿಗಣಿಸಲಾಗಿತ್ತು. ಮೂಲಗಳ ಪ್ರಕಾರ, ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಖಾದರ್ ಅವರಿಗೆ ದೂರವಾಣಿ […]

ಮಂಗಳೂರು ವಿಶ್ಯವಿದ್ಯಾನಿಲಯದ ಪದವಿಪೂರ್ವ ಪಠ್ಯಕ್ರಮದಲ್ಲಿ ಪ್ರಾದೇಶಿಕ ಇತಿಹಾಸ ಸೇರ್ಪಡೆ

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಅಂಗವಾಗಿ ದೇಶಾದ್ಯಂತ ಸ್ಥಳೀಯ ಇತಿಹಾಸ ಮತ್ತು ಮಾತೃಭಾಷೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಪ.ಪೂ ಪಠ್ಯಕ್ರಮದಲ್ಲಿ ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿಯ ಸ್ಥಳಿಯ ಇತಿಹಾಸವನ್ನು ಸೇರಿಸಲಾಗಿಲ್ಲ ಎನ್ನುವ ಪುಕಾರು ಎದ್ದಿತ್ತು. ಈ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಯು.ಟಿ.ಖಾದರ್ ಪ್ರಶ್ನಿಸಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುತ್ತಿದ್ದರೂ ಇಲ್ಲಿನ ಸ್ಥಳೀಯ ಇತಿಹಾಸವನ್ನು ಪಠ್ಯದೊಳಗೆ ಸೇರಿಸಲಾಗಿಲ್ಲ. ಕಾಲೇಜಿನ ಆಡಳಿತ ಮಂಡಳಿಯ ನಿರ್ಲಕ್ಯದಿಂದಾಗಿ ಪದವಿಪೂರ್ವ ಹಂತದಲ್ಲಿ ಸ್ಥಳೀಯ ಇತಿಹಾಸವನ್ನು […]