ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹರಿದು ಬಂತು ದಾಖಲೆಯ ಹೊರೆಕಾಣಿಕೆ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪುನರ್ ಪ್ರತಿಷ್ಟೆ, ಬ್ರಹ್ಮಕಲಶೋತ್ಸವ ಹಾಗೂ ಚತುಃಪವಿತ್ರ ನಾಗಬ್ರಹ್ಮಮಂಡಲೋತ್ಸವಕ್ಕೆ ಸಮಸ್ತ ಮೊಗವೀರ ಕುಲಭಾಂದವರಿಂದ ಬೃಹತ್ ಹೊರೆಕಾಣಿಕೆ ಮೆರವಣಿಗೆ ಸಮರ್ಪಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಮೂಲಕ ಆಗಮಿಸಿದ ದಕ್ಷಿಣ ವಿಭಾಗದ ಹೊರೆಕಾಣಿಕೆ ಮೆರವಣಿಗೆಯನ್ನು ಎರ್ಮಾಳ್ ನಲ್ಲಿ, ಉತ್ತರದ ಶಿರೂರು ಗಡಿಭಾಗದಿಂದ ಮೊದಲ್ಗೊಂಡು ಆಗಮಿಸಿದ ಉಡುಪಿ ಜಿಲ್ಲೆಯ ಹೊರೆ ಕಾಣಿಕೆ ಮೆರವಣಿಗೆಗೆ ಮುಳೂರಿನಲ್ಲಿ ಚಾಲನೆ ನೀಡಲಾಗಿದೆ. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಮತ್ತು ಬ್ರಹ್ಮಕಲಶ‌ ಸಮಿತಿ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್ ಸಹಿತ ದ.ಕ. […]