ಮೇ 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಶ್ರೀ ಕ್ಷೇತ್ರದಲ್ಲಿ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಲ ಸೂತ್ರವನ್ನು ನೀಡಲಾಗುವುದು. ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಸಾಮೂಹಿಕ ವಿವಾಹದ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ| […]