ಮುಂಬರುವ ತಾ.ಪಂ ಹಾಗೂ ಜಿ.ಪಂ. ಚುನಾವಣೆಗೆ ಇಂದಿನಿಂದಲೇ ಸಿದ್ದತೆ: ಉದಯ್ ಕುಮಾರ್ ಶೆಟ್ಟಿ

ಕಾರ್ಕಳ: ಮುಂಬರುವ ತಾ.ಪಂ ಹಾಗೂ ಜಿ.ಪಂ. ಚುನಾವಣೆಗೆ ನಾವು ಇಂದಿನಿಂದಲೇ ಸಿದ್ದತೆ ನಡೆಸಬೇಕಿದೆ. ಗೆಲುವಿವಾಗಿ ಪ್ರತಿ ಬೂತ್ ನ ಕಾರ್ಯಕರ್ತರು ಟೀಂ ಆಗಿ ಕಾರ್ಯನಿರ್ವಹಿಸಬೇಕಿದೆ ಎಂದು ಉದಯ ಶೆಟ್ಟಿ ಮುನಿಯಾಲು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಮೇ 22ರಂದು ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದ ಮತದಾರರು ಸ್ಪಷ್ಟ ಬಹುಮತದೊಂದಿಗೆ ಸುಭದ್ರ ಸರಕಾರ ರಚಿಸುವಲ್ಲಿ ಬೆಂಬಲ ನೀಡಿದ್ದಾರೆ. ಕಾರ್ಕಳದಲ್ಲೂ ಕಾಂಗ್ರೆಸ್‌ ಗೆಲುವಿಗಾಗಿ ಕಾರ್ಯಕರ್ತರು ರಾತ್ರಿ ಹಗಲೆನ್ನದೆ ದುಡಿದಿದ್ದಾರೆ. ಅವರ ಶ್ರಮ ನಮ್ಮ ಮನಸ್ಸಿನಲ್ಲಿದೆ […]