ಉಡುಪಿ: 115 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರಿಸಿದ್ದು, ಇಂದು ಕೂಡ 115 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಂಟೈನ್ ಮೆಂಟ್ ಝೋನ್ ಆಗಿರುವ ಮಣಿಪಾಲದ ಎಂಐಟಿ ಕ್ಯಾಂಪಸ್ ನಲ್ಲಿ 70 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಉಡುಪಿ ತಾಲೂಕಿನಲ್ಲಿ 84, ಕುಂದಾಪುರದಲ್ಲಿ 24 ಹಾಗೂ ಕಾರ್ಕಳದಲ್ಲಿ 7 ಪ್ರಕರಣಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.