ಉಡುಪಿ:ಪ್ರಥಮ ಪಿ.ಯು.ಸಿ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಹಾಗೂ ಬ್ರಹ್ಮಾವರ ತಾಲೂಕಿನ ಆರೂರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಮೇ 11 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜು ಮೊ.ನಂ: […]