ಕಾಂಗ್ರೆಸ್ ನ ಕಾಮಾಲೆ ಕಣ್ಣಿಗೆ ಜಗವೆಲ್ಲಾ ಹಳದಿ: ಕಿದಿಯೂರು ಉದಯಕುಮಾರ್ ಶೆಟ್ಟಿ

ಉಡುಪಿ: ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರದ ಜಾಹೀರಾತುಗಳಲ್ಲಿ ಬಿಜೆಪಿ ಕರ್ನಾಟಕದ ಜನತೆಗೆ ಚೆಂಬು ನೀಡಿದೆ ಎಂದು ಪ್ರಚಾರ ಮಾಡುತ್ತಿರುವುದು, ಕಾಮಾಲೆ ಕಣ್ಣಿನವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯಕುಮಾರ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ. ಅವರು ಉಡುಪಿ ವಿಧಾನಸಭಾ ಕ್ಷೇತ್ರದ ದೊಡ್ಡಣಗುಡ್ಡೆಯ ಮಣೋಲಿಗುಜ್ಜಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು ನಾಲ್ಕು ತಲೆಮಾರುಗಳ ಆಡಳಿತ ನಡೆಸಿದ ಕಾಂಗ್ರೆಸ್ ಗೆ ಕನಿಷ್ಠ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಜನರ ಕೈಗೆ […]

ಹಿಂದುತ್ವದ ಭದ್ರಕೋಟೆಗೆ ಪ್ರಧಾನಿಯ ಆಗಮನ: ಏ.14 ರಂದು ಮೋದಿ ಮಂಗಳೂರಿಗೆ

ಮಂಗಳೂರು: ಅವಿಭಜಿತ ದ.ಕ ಜಿಲ್ಲೆಯ ಭಾಜಪಾ ಕಾರ್ಯಕರ್ತರು ಬಹುದಿನಗಳಿಂದ ಕಾತರದಿಂದ ಕಾಯುತ್ತಿದ್ದ ಘಳಿಗೆ ಬಂದೇ ಬಿಟ್ಟಿದೆ. ಹಿಂದುತ್ವದ ಭದ್ರಕೋಟೆ ಎಂದೇ ಹೆಸರುವಾಸಿಯಾದ ಅವಳಿ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಿಸಲಾಗಿದ್ದು ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಪ್ರಚಾರ ನಡೆಯಲಿದೆ. ಈ ಹಿಂದೆ ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ […]

ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ಸೇರ್ಪಡೆ

ಉಡುಪಿ: ಮಾಜಿ ಸಂಸದ ಹಾಗೂ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ (Congress) ಸೇರ್ಪಡೆಗೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ. ಮಾರ್ಚ್ 12 ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕೆ ಪಿ ಸಿ ಸಿ ಕಚೇರಿಯಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಅವರು ತಿಳಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Loksabha Elections) ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಪುತ್ತಿಗೆ ಶ್ರೀಗಳನ್ನು ಭೇಟಿ ಮಾಡಿದ ಇಸ್ರೋ ಸಹ ನಿರ್ದೇಶಕ ಡಾ. ಎಸ್.ವಿ. ಶರ್ಮಾ

ಉಡುಪಿ: ದೇಶದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಯಾದ ಬೆಂಗಳೂರಿನ ಇಸ್ರೋ ಸಂಸ್ಥೆಯ ಸಹ ನಿರ್ದೇಶಕ ಡಾ. ಎಸ್.ವಿ. ಶರ್ಮಾ ಪುತ್ತಿಗೆ ಶ್ರೀಪಾದರನ್ನು ಭೇಟಿ ಮಾಡಿ ಇಸ್ರೋ (ISRO) ಸಂಸ್ಥೆಯ ಸ್ಮರಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀಪಾದರು ಶ್ರೀಕೃಷ್ಣನ ಪ್ರಸಾದವನ್ನು ನೀಡಿ ಅವರನ್ನು ಆಶೀರ್ವದಿಸಿದರು.

ಶಂಕಿತ ನಕ್ಸಲ್ ಬಂಧನ: ಕೇರಳ ಪೊಲೀಸರಿಂದ ಕಾರ್ಯಾಚರಣೆ

ಚಿಕ್ಕಮಗಳೂರು/ಉಡುಪಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ಶಂಕಿತ ನಕ್ಸಲ್‌ ಸುರೇಶ್ ಅಲಿಯಾಸ್‌ ಪ್ರದೀಪ್‌ನನ್ನು ಕೇರಳದ ಕಣ್ಣೂರಿನ ಕಂಚಿರಕೊಲ್ಲಿ ಅರಣ್ಯದಲ್ಲಿ ಕೇರಳ ಪೊಲೀಸರು ಬಂಧಿಸಿದ್ದಾರೆ. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್‌ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ಹಲವೆಡೆ ಸುರೇಶ್ ವಿರುದ್ಧ 35ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿ ಚೇತರಿಸಿಕೊಂಡ ಬಳಿಕ ಬಾಡಿ ವಾರೆಂಟ್‌ ಪಡೆದು ರಾಜ್ಯಕ್ಕೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ನಕ್ಸಲ್ ನಿಗ್ರಹ ದಳದ ಎಸ್‌ಪಿ […]