ರಂಗೇರಿದ ಚುನಾವಣಾ ಕಣ: ಮೊದಲ ದಿನ 4 ನಾಮಪತ್ರ ಸಲ್ಲಿಕೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೊದಲ ದಿನದಂದು ಜಿಲ್ಲೆಯಲ್ಲಿ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿದೆ. 119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ದಿನೇಶ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಮದಾಸ ಭಟ್ ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ […]
ಪಕ್ಷದ ಕಾರ್ಯತಂತ್ರದಂತೆ ಚುನಾವಣೆ ಎದುರಿಸುತ್ತೇವೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಹೊರತು ಎದುರಾಳಿ ಅಭ್ಯರ್ಥಿಗಳ ಆಲೋಚನೆಯಿಂದಲ್ಲ. ಬಿಜೆಪಿಯ ಅಭ್ಯರ್ಥಿ ಒಂದೇ ಸಮುದಾಯಕ್ಕೆ ಸಂಬಂಧಪಟ್ಟಿದ್ದರೂ, ಇಲ್ಲಿನ ಮತದಾರರು ಬುದ್ದಿವಂತರು ಮತ್ತು ವಿದ್ಯಾವಂತರೂ ಆಗಿರುವ ಕಾರಣ ಸರಿಯಾದ ಶಾಸಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಳೆದ ಆರು ತಿಂಗಳಿನಿಂದ ಕ್ಷೇತ್ರದಲ್ಲಿ ಸಿದ್ದತೆ ನಡೆಸುತ್ತಿದ್ದು, 100 ಸದಸ್ಯರ ಕಮಿಟಿ […]
ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: 52 ಹೊಸ ಮುಖಗಳು, 8 ಮಹಿಳೆಯರಿಗೆ ಮಣೆ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕರ್ನಾಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪಟ್ಟಿಯನ್ನು ಘೋಷಿಸಿದರು. ಪಕ್ಷವು ತನ್ನ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳು ಮತ್ತು 8 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ತನ್ನ ಸಾಂಪ್ರದಾಯಿಕ ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಿದ್ದರೆ, […]
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ; ಗೆಲುವೇ ನನ್ನ ಗುರಿ: ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಶಾಸಕನಾಗಿ ನನ್ನ ಅಭಿಮಾನಿಗಳ ಸೇವೆ ಮಾಡಬೇಕೆಂಬುದು ನನ್ನ ಜೀವನದ ಬಹಳ ದೊಡ್ಡ ಆಸೆ. ಆದರೆ ಹಲವು ವರ್ಷಗಳ ಕಾಲ ಪಕ್ಷಕ್ಕೆ ದುಡಿದವರನ್ನು ಬಿಟ್ಟು ನಿನ್ನೆ ಮೊನ್ನೆ ಬಂದವರಿಗೆ ಟಿಕೆಟ್ ನೀಡಲಾಗಿದೆ. ಆದುದರಿಂದ ನಾನು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ನನಗೆ ಎಲ್ಲರ ಸಹಕಾರ ಬೇಕು. ನಾನು ಗೆಲುವು ಸಾಧಿಸಿಯೇ ಸಿದ್ಧ. ಅಭಿಮಾನಿಗಳ ಸಹಕಾರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮಗೆ ಪಕ್ಷವೇ ದೊಡ್ಡದು. […]
ಲೈನ್ ಶಿಫ್ಟಿಂಗ್ ಕಾಮಗಾರಿ: ಮಾ. 31 ರಂದು ವಿದ್ಯುತ್ ವ್ಯತ್ಯಯ

ಉಡುಪಿ: ಲೈನ್ ಶಿಫ್ಟಿಂಗ್ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್, ಕೆ.ಹೆಚ್.ಬಿ, ಪದವು ಮತ್ತು ನಕ್ರೆ ಫೀಡರ್‌ಗಳ ಬೈಲೂರು, ನೀರೆ, ಎರ್ಲಪಾಡಿ, ಕೌಡೂರು, ಪರಪು, ಗುಂಡ್ಯಡ್ಕ, ಬೋರ್ಗಲ್ ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಜಾರ್ಕಳ, ಕೆ.ಹೆಚ್.ಬಿ. ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 31 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ […]