ಉಡುಪಿ ಹಾಗೂ ಬ್ರಹ್ಮಾವರದಲ್ಲಿ ಸ್ಮಶಾನ ಭೂಮಿಗಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು, ಉಡುಪಿ ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕರಿಗೆ ಅವರ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನಿನ ಅವಶ್ಯಕತೆ ಇದ್ದಲ್ಲಿ ಬೇಡಿಕೆಗಳನ್ನು ತಾಲೂಕಿನ ತಹಶೀಲ್ದಾರರು ಅಥವಾ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸ್ಮಶಾನ ಭೂಮಿ ಅವಶ್ಯಕತೆಯ ಬಗ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮನವಿಯ ಜೊತೆಗೆ ಹೆಸರು, ತಂದೆಯ ಹೆಸರು, ಆಧಾರ್ ಕಾರ್ಡ್ ನಂಬರ್, […]

ಮಂಗಳೂರಿನಲ್ಲಿ ರದ್ದಾದ ಕಾವೇರಿ ಆನ್ ಲೈನ್ ಪೈಲಟ್ ಪ್ರಾಜೆಕ್ಟ್ ಉಡುಪಿಗೇತಕ್ಕೆ? ರಮೇಶ್ ಕಾಂಚನ್ ಆರೋಪ

ಉಡುಪಿ: ಭೂ ಮಾರಾಟ, ಖರೀದಿ ಇತ್ಯಾದಿ ದಾಖಲೆಗಳ ನೋಂದಣಿಯನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನಡೆಸುವ ಸರಕಾರದ ಕಾವೇರಿ ವೆಬ್ ಪೋರ್ಟಲ್ ಸೇವೆಯನ್ನು ಮಂಗಳೂರು ತಾಲೂಕು ನೋಂದಾವಣಾ ಕಚೇರಿಯಲ್ಲಿ ಸಾರ್ವಜನಿಕರ ವಿರೋಧದ ಕಾರಣ ರದ್ಧು ಪಡಿಸಿರುವ ಬೆನ್ನಿಗೆ ಆ ಕಡ್ಡಾಯ ಆನ್‌ಲೈನ್ ಪ್ರಾಜೆಕ್ಟನ್ನು ಉಡುಪಿಯಲ್ಲಿ ಜಾರಿಗೊಳಿಸಲು ದಿಢೀರ್ ಯತ್ನ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ. ಮಂಗಳೂರು ತಾಲೂಕು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಂತಹ ಪ್ರಯತ್ನ ನಡೆದಾಗ ಜನಸಾಮಾನ್ಯರೊಂದಿಗೆ ವಕೀಲರು, ದಸ್ತಾವೇಜು ಬರಹಗಾರರು […]

ಕಾಂಗ್ರೆಸ್ ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆ

ಉಡುಪಿ: ವಿಧಾನಸಭಾ ಕ್ಷೇತ್ರದ ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ತ್ರಿಶ್ಶೂರಿನ ಸಂಸದ ಟಿ.ಎನ್ ಪ್ರತಾಪನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 132 ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರು ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 94 ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವಿಸಿ, ಪಕ್ಷವನ್ನು ತಳಮಟ್ಟದಿಂದ […]

ಉಡುಪಿ: ತಡರಾತ್ರಿಯ ಕ್ಯಾಂಟೀನ್ ಪ್ರಾರಂಭಿಸಿದ ತೃತೀಯಲಿಂಗಿಗಳು; ಮೊದಲ ಎಂಬಿಎ ಪದವೀಧರ ತೃತೀಯಲಿಂಗಿಯಿಂದ ಹೂಡಿಕೆ

ಉಡುಪಿ: ಮೂವರು ತೃತೀಯಲಿಂಗಿಗಳ ಗುಂಪು ನಗರದಲ್ಲಿ ರಾತ್ರಿಯಿಡೀ ನಡೆಯುವ ಕ್ಯಾಂಟೀನ್ ಒಂದನ್ನು ತೆರೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪೂರ್ವಿ, ವೈಷ್ಣವಿ ಮತ್ತು ಚಂದನಾ ಮೂವರು ತೃತೀಯಲಿಂಗಿಗಳಾಗಿದ್ದು, ಉಡುಪಿಯ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದರು. ಅನೇಕ ಪ್ರವಾಸಿಗರು ಈ ಪಟ್ಟಣದಲ್ಲಿ ತಡರಾತ್ರಿಯಲ್ಲಿ ಆಹಾರಕ್ಕಾಗಿ ಹುಡುಕುತ್ತಿದ್ದಾರೆ ಎಂದು ಗೊತ್ತಾದಾಗ ಹೊಸ ಪರಿಕಲ್ಪನೆಯ ತಡರಾತ್ರಿಯ ಕ್ಯಾಂಟೀನ್ ಅನ್ನು ಪ್ರಾರಂಭಿಸಲು ನಿರ್ಧರಿಸಿದರು ಮತ್ತು ಅವರ ಈ ಕೆಲಸಕ್ಕೆ ಬೆಂಬಲ ನೀಡಿದ್ದು, ಸಮೀಕ್ಷಾ ಕುಂದರ್, ಕರ್ನಾಟಕದಲ್ಲಿ ಎಂಬಿಎ ವ್ಯಾಸಂಗ ಮಾಡಿದ ಮೊದಲ […]

ನಾಪತ್ತೆಯಾಗಿ ಮೂರು ತಿಂಗಳು ಕಳೆದರೂ ಪತ್ತೆಯಾಗಿಲ್ಲ ಉಡುಪಿ ಪಬ್ಲಿಕ್ ಪ್ರಾಸಿಕ್ಯೂಟರ್ ತಾಯಿ

ಉಡುಪಿ: ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಲು ಹಗಲಿರುಳು ಶ್ರಮಿಸುವ ಉಡುಪಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಜಯರಾಮ ಶೆಟ್ಟಿ ಅವರ ತಾಯಿ ಕಳೆದ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದು, ಇವರ ಬಗ್ಗೆ ಸುಳಿವು ಇನ್ನೂ ಲಭ್ಯವಾಗಿಲ್ಲ. ಉಡುಪಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಜಯರಾಮ ಶೆಟ್ಟಿಯವರ ತಾಯಿ ವನಜಾ ಶೆಡ್ತಿಯವರು ಬ್ರಹ್ಮಾವರದ ವರಂಬಳ್ಳಿಯಲ್ಲಿ ತಮ್ಮ ಇನ್ನೊಬ್ಬ ಮಗನ ಮನೆಯಲ್ಲಿ ವಾಸವಾಗಿದ್ದು, ನವೆಂಬರ್ 14, 2022 ರಂದು, ಆಕೆ ಏಕಾಏಕಿ ಮನೆಯಿಂದ ಕಾಣೆಯಾಗಿದ್ದಾರೆ. ಜಯರಾಮ್ ಶೆಟ್ಟಿ ಮತ್ತು ಮನೆಯವರು ಆಕೆಗಾಗಿ ಎಲ್ಲಾ ಕಡೆ […]