ಕಮಲಾಕ್ಷಿ ಸಹಕಾರಿ ಸಂಘ ಬಹುಕೋಟಿ ಹಗರಣ: ಸೊಸೈಟಿ ಅಧ್ಯಕ್ಷರಿಗೆ ಜ.11ರವರೆಗೆ ನ್ಯಾಯಾಂಗ ಬಂಧನ

ಉಡುಪಿ: ಸುಮಾರು 100 ಕೋಟಿ ರೂಪಾಯಿಗೂ ಮಿಕ್ಕಿ ವಂಚನೆ ನಡೆದಿದೆ ಎನ್ನಲಾದ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿ ವಿ ಲಕ್ಷ್ಮೀನಾರಾಯಣ ಅವರನ್ನು ಉಡುಪಿ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಹಗರಣ ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದ ಇವರನ್ನು ಪತ್ತೆ ಹಚ್ಚುವಲ್ಲಿ ಸೆನ್ ಪೊಲೀಸರು ಬ್ರಹ್ಮಾವರ ಸಮೀಪದ ಮಟಪಾಡಿ ಬಳಿ ಬಂಧಿಸಿದ್ದಾರೆ. ಇವರ ಮೇಲೆ ವಂಚನೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗದ ಮುಂದೆ ಹಾಜರು ಪಡಿಸಲಾಗಿದೆ. ಉಡುಪಿ ಜೆಎಂಎಫ್‌ಸಿ ನ್ಯಾಯಾಲಯವು ಲಕ್ಷ್ಮೀನಾರಾಯಣ ಅವರನ್ನು 2023ರ ಜನವರಿ 11ರವರೆಗೆ ನ್ಯಾಯಾಂಗ […]
ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣ: ಕೆ.ರಘುಪತಿ ಭಟ್

ಕಾರ್ಕಳ: ಇಲ್ಲಿನ ಪರ್ಕಳ-ಮಣಿಪಾಲ ರಾ.ಹೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಮಣಿಪಾಲದಿಂದ ಉಡುಪಿ ಸಂಪರ್ಕಿಸುವ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಕೆಳಪರ್ಕಳ ರಸ್ತೆಯನ್ನು ಸರಿಪಡಿಸಲು ಶಾಸಕ ರಘುಪತಿ ಭಟ್ ಸಭೆ ನಡೆಸಿದ್ದು ಅದರಂತೆ ಈಗ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ವಾಹನ ಸಂಚಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಪರ್ಕಳ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ – ಉಡುಪಿ ಸಂಪರ್ಕಿಸುವ ವಾಹನಗಳ ಸುಗಮ ಸಂಚಾರಕ್ಕೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಲು ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ರಸ್ತೆ […]
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದ ಅಂಗವಾಗಿ ಜಿಲ್ಲೆಗೆ ಭೇಟಿ ನೀಡಿದ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ಹಾಗೂ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ 8122 ಮಂದಿ ಯುವ ಮತದಾರರನ್ನು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಯುವ ಮತದಾರರ ಸೇರ್ಪಡೆ ಕಾರ್ಯವನ್ನು ಚುನಾವಣಾ ಆಯೋಗವು ವರ್ಷದಲ್ಲಿ ನಿಗದಿಪಡಿಸಿರುವ […]
ಉಡುಪಿ: ಡಿ. 29 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 29 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ,ಲಿ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, […]
ಡಿ. 26 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯು ಡಿಸೆಂಬರ್ 26 ರಂದು ಬೆಳಗ್ಗೆ 10.30 ಕ್ಕೆ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, […]