ಶಂಕಿತ ನಕ್ಸಲ್ ಬಂಧನ: ಕೇರಳ ಪೊಲೀಸರಿಂದ ಕಾರ್ಯಾಚರಣೆ

ಚಿಕ್ಕಮಗಳೂರು/ಉಡುಪಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ಶಂಕಿತ ನಕ್ಸಲ್ ಸುರೇಶ್ ಅಲಿಯಾಸ್ ಪ್ರದೀಪ್‌ನನ್ನು ಕೇರಳದ ಕಣ್ಣೂರಿನ ಕಂಚಿರಕೊಲ್ಲಿ ಅರಣ್ಯದಲ್ಲಿ ಕೇರಳ ಪೊಲೀಸರು ಬಂಧಿಸಿದ್ದಾರೆ. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್‌ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ಹಲವೆಡೆ ಸುರೇಶ್ ವಿರುದ್ಧ 35ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿ ಚೇತರಿಸಿಕೊಂಡ ಬಳಿಕ ಬಾಡಿ ವಾರೆಂಟ್ ಪಡೆದು ರಾಜ್ಯಕ್ಕೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ನಕ್ಸಲ್ ನಿಗ್ರಹ ದಳದ ಎಸ್‌ಪಿ […]
ಕರಾವಳಿ ಹಾಗೂ ಮಲೆನಾಡಿನಲ್ಲಿ ನಕ್ಸಲರ ಓಡಾಟ: ಕಟ್ಟೆಚ್ಚರ ವಹಿಸಲು ನಕ್ಸಲ್ ನಿಗ್ರಹ ದಳಕ್ಕೆ ಸೂಚನೆ

ಉಡುಪಿ: ನಕ್ಸಲ್ ತಂಡದ ನಾಯಕ ವಿಕ್ರಮ್ ಗೌಡ ಹಾಗೂ ಆತನ ಸಹಚರರರು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಓಡಾಟ ನಡೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಈ ಎರಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಐದು ದಿನಗಳ ಕಾಲ ಹೈ ಅಲರ್ಟ್ ಘೋಷಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಎಎನ್‍ಎಫ್‍ಗೆ ಸೂಚನೆ ನೀಡಲಾಗಿದೆ. ನಕ್ಸಲ್ ಮುಖಂಡ ಸಾಕೇತ್ ರಾಜನ್ ಸಾವಿನ ಬಳಿಕ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದು, ಈಗ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವಿಕ್ರಮ್ ಗೌಡ ಓಡಾಟದ ಸುಳಿವು ಸಿಕ್ಕಿದೆ. ಈ ಭಾಗದಲ್ಲಿ ನಕ್ಸಲರ […]
ಶ್ರೀ ಕೃಷ್ಣ ಮಠಕ್ಕೆ ಇಂಧನ ಸಚಿವರ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಇಂಧನ ಸಚಿವರಾದ ಕೆ. ಜೆ.ಜಾರ್ಜ್ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಭೇಟಿ ಮಾಡಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಪಾದರು ವಿಶ್ವ ಗೀತಾ ಪರ್ಯಾಯ ಬಗ್ಗೆ ತಿಳಿಸಿ ಭಗವದ್ಗೀತೆಯ ವ್ಯಾಪಕ ಪ್ರಚಾರದ ಬಗ್ಗೆ ಮಾಹಿತಿ ನೀಡಿ ಸಚಿವರಿಗೆ ಭಗವದ್ಗೀತೆಯ ಪುಸ್ತಕವನ್ನು ನೀಡಿ ಹರಸಿದರು.
ವಾಶ್ ರೂಂ ನಲ್ಲಿ ವೀಡಿಯೋ ಪ್ರಕರಣ: ರಾಜ್ಯಪಾಲರನ್ನು ಭೇಟಿಯಾಗಿ ವಿಶೇಷ ತನಿಖೆಗೆ ಮನವಿ ಸಲ್ಲಿಸಿದ ಕರಾವಳಿ ಶಾಸಕರು

ಬೆಂಗಳೂರು: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂನಲ್ಲಿ ನಡೆದ ವಿಡಿಯೋ ಚಿತ್ರೀಕರಣದ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ವಿಶೇಷ ತನಿಖಾ ತಂಡದ ಸುಪರ್ದಿಗೆ ನೀಡುವಂತೆ ಕರಾವಳಿಯ ಶಾಸಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲೆಯ ಶಾಸಕರುಗಳಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ದ.ಕ ಜಿಲ್ಲೆಯ ಶಾಸಕರುಗಳಾದ ಭರತ್ […]
ವಾಶ್ ರೂಂನಲ್ಲಿ ವೀಡಿಯೋ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಉಡುಪಿ ಜಿಲ್ಲಾ ಬಜರಂಗದಳ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಶ್ರೀ ಕೃಷ್ಣ ಮಠದ ಹಿಂಭಾಗದಲ್ಲಿರುವ ಪಾರ್ಕಿಂಗ್ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ […]