ವಾಶ್ ರೂಂ ನಲ್ಲಿ ವೀಡಿಯೋ ಪ್ರಕರಣ: ರಾಜ್ಯಪಾಲರನ್ನು ಭೇಟಿಯಾಗಿ ವಿಶೇಷ ತನಿಖೆಗೆ ಮನವಿ ಸಲ್ಲಿಸಿದ ಕರಾವಳಿ ಶಾಸಕರು

ಬೆಂಗಳೂರು: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂನಲ್ಲಿ ನಡೆದ ವಿಡಿಯೋ ಚಿತ್ರೀಕರಣದ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ವಿಶೇಷ ತನಿಖಾ ತಂಡದ ಸುಪರ್ದಿಗೆ ನೀಡುವಂತೆ ಕರಾವಳಿಯ ಶಾಸಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲೆಯ ಶಾಸಕರುಗಳಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ದ.ಕ ಜಿಲ್ಲೆಯ ಶಾಸಕರುಗಳಾದ ಭರತ್ […]

ವಾಶ್ ರೂಂನಲ್ಲಿ ವೀಡಿಯೋ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಉಡುಪಿ ಜಿಲ್ಲಾ ಬಜರಂಗದಳ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಶ್ರೀ ಕೃಷ್ಣ ಮಠದ ಹಿಂಭಾಗದಲ್ಲಿರುವ ಪಾರ್ಕಿಂಗ್ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ […]

ಉಡುಪಿ ವೀಡಿಯೋ ಪ್ರಕರಣ: ಆ. 4 ರಂದು ರಾಜ್ಯಪಾಲರನ್ನು ಭೇಟಿಯಾಗಿ ವಿಶೇಷ ತನಿಖೆಗೆ ಕೋರಿಕೆ ಸಲ್ಲಿಸಲಿರುವ ಉಡುಪಿ ಶಾಸಕರು

ಉಡುಪಿ: ಶೌಚಾಲಯದಲ್ಲಿ ಮೊಬೈಲ್ ಬಳಸಿ ಮೂವರು ವಿದ್ಯಾರ್ಥಿನಿಯರು ಸಹ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಐವರು ಶಾಸಕರು ಆಗಸ್ಟ್ 4 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಸಮಸ್ಯೆಯ ಗಂಭೀರತೆಯನ್ನು ತಿಳಿಸಲಿದ್ದು, ವಿಶೇಷ ತನಿಖೆಗೆ ಕೋರಿಕೆ ಸಲ್ಲಿಸಲಿದ್ದಾರೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನೇತ್ರ ಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಆಡಳಿತಾಧಿಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವ ಮೂಲಕ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು […]

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯನ್ನು 1 ನೇ ಸ್ಥಾನಕ್ಕೇರಿಸಲು ಅಧಿಕಾರಿಗಳು ಶ್ರಮವಹಿಸಿ: ಸಿಎಂ ಸಿದ್ದರಾಮಯ್ಯ

ಉಡುಪಿ: ಜಿಲ್ಲೆಯ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದು ಆರೋಗ್ಯ ಇಲಾಖೆಯ ಆದ್ಯ ಕರ್ತವ್ಯಗಳಲ್ಲಿ ಒಂದಾಗಿದೆ. ಪ್ರಸ್ತುತ ಜಿಲ್ಲೆಯು ಆರೋಗ್ಯ ಸೇವೆ ಸೂಚ್ಯಂಕದಲ್ಲಿ 18ನೇ ಸ್ಥಾನದಲ್ಲಿದೆ. ಆದರೆ 2015 ನೇ ಸಾಲಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿತ್ತು. ಇದು ಅಧಿಕಾರಿಗಳ ಉದಾಸೀನತೆಯನ್ನು ತೋರುತ್ತದೆ. ಮತ್ತೊಮ್ಮೆ ಜಿಲ್ಲೆಯನ್ನು 1 ನೇ ಸ್ಥಾನಕ್ಕೆ ತರಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಶ್ರಮವಹಿಸಿ, ಕೆಲಸ ಮಾಡಬೇಕು. ಆರೋಗ್ಯ ಸಿಬ್ಬಂದಿಗಳು ಜನರಿಗೆ ಉತ್ತಮ ಸೇವೆಗಳನ್ನು ಒದಗಿಸದಿದ್ದಲ್ಲಿ ಮರಣ ಹೊಂದುವವರ ಸಂಖ್ಯೆ […]

ವೀಡಿಯೋ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಉಡುಪಿಗೆ

ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಕೂಲಕಂಷ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರದಂದು ಉಡುಪಿಗೆ ಆಗಮಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳ ಸಮಸ್ಯೆ ಕುರಿತು ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಈ ಸಂಬಂಧ ಪೊಲೀಸರನ್ನು ಭೇಟಿಯಾಗಿ ಎಫ್‌ಐಆರ್ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಗುರುವಾರದಂದು ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತೆ, ಮೂವರು […]