ರಾಜ್ಯದಲ್ಲೇ ಪ್ರಥಮ: ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ “ಆರೋಗ್ಯ ಶನಿವಾರ”; ಉಡುಪಿ ಶಿಕ್ಷಣ ಇಲಾಖೆಯ ನಿನೂತನ ಕಾರ್ಯ

ಮಲೇರಿಯಾ, ಡೆಂಗ್ಯೂ, ಜ್ವರ, ನೆಗಡಿ ಕಾಯಿಲೆಗಳು ಯಾವಾಗ ಬರುತ್ತವೆ, ಈ ರೋಗಗಳು ಏಕೆ ಬರುತ್ತವೆ, ಯಾವುದರಿಂದ ಬರುತ್ತದೆ, ಅವುಗಳ ಲಕ್ಷಣಗಳೇನು, ಈ ರೋಗಗಳು ಬಾರದಂತೆ ಏನು ಮಾಡಬೇಕು, ನಮ್ಮ ಆರೋಗ್ಯವನ್ನು ಸುರಕ್ಷಿತವಾಗಿ ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಈ ಎಲ್ಲಾ ವಿಷಯಗಳ ಬಗ್ಗೆ ಶಾಲಾ ಮಕ್ಕಳಿಗೆ ನಿರಂತರವಾಗಿ ತಿಳಿಸುವ ವಿನೂತನ ಮತ್ತು ಬಹುಶ: ರಾಜ್ಯದಲ್ಲೇ ಪ್ರಥಮವಾದ “ಆರೋಗ್ಯ ಶನಿವಾರ” ಎಂಬ ಕಾರ್ಯಕ್ರಮ ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಲಾಗಿದ್ದು, ಇದರಿಂದ ಉತ್ತಮ ಫಲಿತಾಂಶ ಕಂಡು ಬರುತ್ತಿದೆ. ಉಡುಪಿ […]
ಭಾರೀ ಮಳೆ: ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಆಸುಪಾಸಿನ ಪ್ರದೇಶಗಳು ಸಂಪೂರ್ಣ ಮುಳುಗಡೆ

ಉಡುಪಿ: ಕಳೆದ 2-3 ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಆಸುಪಾಸಿನ ಪ್ರದೇಶಗಳಾದ ಬೈಲಕರೆ ಹಾಗೂ ಕಲ್ಸಂಕ ಹತ್ತಿರದ ಮನೆಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ನೇತೃತ್ವದಲ್ಲಿ ಸಹಾಯಕ ಅಗ್ನಿಶಾಮಕ ದಳದ ಅಧಿಕಾರಿ ಮೀರ್ ಮೊಹ್ಮದ್ ಗೌಸ್ ಹಾಗೂ ಸಿಬ್ಬಂದಿಗಳ ಸಹಾಯದಿಂದ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕುಂಜಿಬೆಟ್ಟು ನಗರಸಭಾ ಸದಸ್ಯ ಗಿರೀಶ್ ಅಂಚನ್, ಮಾಜಿ ನಗರಸಭಾ […]
ಉಡುಪಿಯಲ್ಲಿಯೂ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿ: ಎಸ್. ಡಿ.ಪಿ. ಐ ಆಗ್ರಹ

ಉಡುಪಿ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿದಂತೆ ಉಡುಪಿ ಜಿಲ್ಲೆಯಲ್ಲಿಯೂ ಸಹ ಸ್ಥಾಪಿಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾಗಿರುವ ಶಾಹಿದ್ ಅಲಿ ಆಗ್ರಹಿಸಿದ್ದಾರೆ. ಉಡುಪಿ ಸೌಹಾರ್ದತೆ ಹಾಗೂ ಶಿಕ್ಷಣಕ್ಕೆ ಹೆಸರುವಾಸಿಯಾದ ಜಿಲ್ಲೆ, ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಬೇರೆ ಬೇರೆ ರಾಜ್ಯಗಳಿಂದ ಉಡುಪಿ ಜಿಲ್ಲೆಗೆ ವಿದ್ಯಾರ್ಥಿಗಳು ಬರುತ್ತಾರೆ. ಅದೇ ರೀತಿ ಉಡುಪಿ ಉತ್ತಮ ಪ್ರವಾಸಿ ತಾಣವೂ ಹೌದು. ಆದರೆ ಕಳೆದ ಕೆಲವು ವರ್ಷಗಳಿಂದ ಕೋಮುವಾದಿ ಶಕ್ತಿಗಳು ಒಂದು ಸಮುದಾಯವನ್ನು ಗುರಿಪಡಿಸಿಕೊಂಡು […]
ಸಮಾಜಕ್ಕೆ ನೀಡಿದ ಅತ್ಯುತ್ತಮ ಕೊಡುಗೆ ಮಿಷನ್ ಆಸ್ಪತ್ರೆ: ಶತಮಾನೋತ್ಸವ ಸಂಭ್ರಮದಲ್ಲಿ ಫಾ.ಹೇಮಚಂದ್ರ ಕುಮಾರ್ ಅಭಿಮತ

ಉಡುಪಿ: ಸುಮಾರು ನೂರು ವರ್ಷಗಳ ಹಿಂದೆ ಅತ್ಯಂತ ಕಠಿಣ ಸಂದರ್ಭದಲ್ಲಿ ಪ್ರಾರಂಭವಾದ ಲೊಂಬಾರ್ಡ್(ಮಿಷನ್) ಆಸ್ಪತ್ರೆ ಸಮಾಜಕ್ಕೆ ನೀಡಿದ ಅತ್ಯುತ್ತಮ ಕೊಡುಗೆಯಾಗಿದೆ. ಡಾ ಈವಾ ಲೊಂಬಾರ್ಡ್ ಎಂಬ ಸ್ವಿಸ್ ಮಿಷನರಿ ವೈದ್ಯರು ಇಲ್ಲಿನ ಬಡ ಜನರಿಗಾಗಿ ಸ್ಥಾಪಿಸಿದ ಆಸ್ಪತ್ರೆಯು ಇಂದು ಶತಮಾನೋತ್ಸವವನ್ನು ಆಚರಿಸುತ್ತಿರುವುದು ಸಂತಸದ ವಿಚಾರ ಎಂದು ಕೆ.ಎಸ್.ಡಿ ಬಿಷಪ್ ರ.ಫಾ ಹೇಮಚಂದ್ರ ಕುಮಾರ್ ಅಭಿಪ್ರಾಯ ಪಟ್ಟರು. ಅವರು ಗುರುವಾರದಂದು ಮಿಷನ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಿಷನ್ ಆಸ್ಪತ್ರೆಯು ಜನರ ನಾಡಿ ಮಿಡಿತ […]
ಮುಂಗಾರು ಋತುವಿನ ಎಫೆಕ್ಟು: ಕರಾವಳಿಯಲ್ಲಿ ಮೀನಿನ ದರ ದುಪ್ಪಟ್ಟು!!

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆಯ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ಹಾಗೂ ಎರಡು ತಿಂಗಳುಗಳವರೆಗೆ ಮೀನುಗಾರಿಕೆಗೆ ನಿಷೇಧ ಹೇರಿರುವುದರಿಂದ ನಿರೀಕ್ಷೆಯಂತೆಯೆ ಮೀನಿನ ದರ ದುಪ್ಪಟ್ಟಾಗಿದೆ. ನಗರದ ಕೆಎಫ್‌ಡಿಸಿ ಯಲ್ಲಿ ಒಂದು ಕೆಜಿ ಬೊಳೆಂಜಿರ್ 1,600 ರೂ, ಅಂಜಲ್ ಮೀನು ಪ್ರತಿ ಕೆಜಿಗೆ 1300 ರೂಗೆ ಮಾರಾಟವಾಗಿದೆ. ಕೇವಲ 12 ದಿನಗಳ ಹಿಂದೆ ಈ ಮೀನುಗಳ ದರ ಈಗಿನ ದರದ ಅರ್ಧದಷ್ಟಿತ್ತು. ದೊಡ್ಡ ಸಿಗಡಿ ಕೆಜಿಗೆ 475 ರೂ ಹಾಗೂ ಬೂತಾಯಿ-ಬಂಗುಡೆ ಮೀನುಗಳು ಕ್ರಮವಾಗಿ ಪ್ರತಿ ಕೆಜಿಗೆ 250 ರೂ ಮತ್ತು […]