ಬಿಜೆಪಿ ಅವಲೋಕನ ಸಭೆ: ಯಶ್ ಪಾಲ್ ಸುವರ್ಣ ಭಾಗಿ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಭಾನುವಾರದಂದು ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿದರು. ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್, ನಗರ ಮಂಡಲ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಮಂಡಲ ಅಧ್ಯಕ್ಷೆ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ […]

ಸಿಜೆಐ ಟಿ.ಎಸ್.ನರಸಿಂಹ ಅವರಿಂದ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಟಿ.ಎಸ್.ನರಸಿಂಹ ತಮ್ಮ ಕುಟುಂಬ ಸಮೇತರಾಗಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರು ಉಪಸ್ಥಿತರಿದ್ದರು.

ಉಡುಪಿ: ನೂತನ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನಾ ಸಮಾರಂಭ

ಉಡುಪಿ: ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಯಶ್ಪಾಲ್ ಎ. ಸುವರ್ಣರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬಿಜೆಪಿ ಜಿಲ್ಲಾಧ್ಯಕ್ಷಕುಯಿಲಾಡಿ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಉಡುಪಿ […]

ಮೇ 25 ರಂದು ಉಡುಪಿ ಜಿಲ್ಲೆಯ ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ […]

ಕುಡಿಯುವ ನೀರಿನ ಸಮರ್ಪಕ ಪೂರೈಕೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಮಳೆಗಾಲ ಪ್ರಾರಂಭವಾಗುವವರೆಗೆ ಸಮರ್ಪಕ ರೀತಿಯಲ್ಲಿ ಕುಡಿಯುವ ನೀರು ಪೂರೈಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು. ಅವರು ಮಂಗಳವಾರದಂದು ನಗರಸಭೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಸ್ತುತ ಕುಡಿಯುವ ನೀರಿಗೆ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡುವ ರೇಷನಿಂಗ್ ವ್ಯವಸ್ಥೆಯನ್ನು ಅಳವಡಿಸಿದ್ದು ಅದನ್ನು ಮುಂದುವರಿಸುವಂತೆ ಹೇಳಿದರು. ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಬೇಡಿಕೆಯನ್ನು ಗಮನಿಸಿ, ನಗರ ಸಭಾ ಸದಸ್ಯರಿಗೆ ಮಾಹಿತಿ ನೀಡಿ […]