ಜಿಲ್ಲಾ ಬಾಲಕಾರ್ಮಿಕ ಸಲಹಾ ಸಮಿತಿ ಸದಸ್ಯರ ನಾಮನಿರ್ದೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಲಹಾ ಸಮಿತಿಯ ಸದಸ್ಯರನ್ನು 2 ವರ್ಷದ ಅವಧಿಗೆ ನಾಮನಿರ್ದೇಶನ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಸರ್ಕಾರೇತರ ಸಂಸ್ಥೆ, ಕಾರ್ಮಿಕ ಸಂಘಟನೆ, ಮಾಲಕರ ಸಂಘವನ್ನು ಪ್ರತಿನಿಧಿಸುವ, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕೆಲಸ ಮಾಡಿರುವ, ಎಸ್.ಸಿ, ಎಸ್.ಟಿ, ಅಲ್ಪಸಂಖ್ಯಾತ ಹಾಗೂ ಮಹಿಳಾ ವರ್ಗಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 8 ರ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಸದಸ್ಯ […]

ಆಗಸ್ಟ್ 14 ರವರೆಗೆ ಜಿಲ್ಲೆಯಾದ್ಯಂತ ಕಲಬೆರಕೆ ಅಡುಗೆ ಎಣ್ಣೆ ಮಾರಾಟಗಾರರ ಪತ್ತೆ ಹಚ್ಚುವಿಕೆ ಕಾರ್ಯ

ಉಡುಪಿ: ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮೂಲಕ ದೇಶದಾದ್ಯಂತ ಆಗಸ್ಟ್ 14 ರ ವರೆಗೆ ಅಡುಗೆ ಎಣ್ಣೆಯಲ್ಲಿ ಕಲಬೆರೆಕೆ, ಎಣ್ಣೆಯಲ್ಲಿ ಟ್ರಾನ್ಸ್ ಫ್ಯಾಟಿ ಆಸಿಡ್ ಅಂಶ, ಸರಿಯಾದ ಲೇಬಲ್ ಮಾಡದೇ ಇರುವುದು, ಅಗ್‌ಮಾರ್ಕ್ ಲೈಸೆನ್ಸ್ ಇಲ್ಲದೇ ಇರುವ ಮಲ್ಟಿಸೋರ್ಸ್ ಅಡುಗೆ ಎಣ್ಣೆ ಮತ್ತು ಪ್ಯಾಕೇಟ್ ಮಾಡದೇ(ಲೂಸ್) ಎಣ್ಣೆ ಮಾರಾಟ ಮಾಡುವವರನ್ನು ಪತ್ತೆ ಹಚ್ಚಲಾಗುತ್ತಿದೆ. ಇದಕ್ಕಾಗಿ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ತಂಡವನ್ನು ರಚಿಸಲಾಗಿದ್ದು, ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಿಗೆ ಭೇಟಿ ನೀಡಿ , ಅಡುಗೆ ಎಣ್ಣೆ ಆಹಾರ […]

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕ್ರಿಯೇಟಿವ್‌ ಕಾಲೇಜಿಗೆ ಪ್ರಥಮ ಸ್ಥಾನ

ಕಾರ್ಕಳ: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್‌ ಶೆಟ್ಟಿ ಮತ್ತು ನಿಹಾರ್‌ ಭಟ್‌ ಪ್ರಥಮ ಸ್ಥಾನ ಗಳಿಸಿದ್ದಾರೆ. ‘ಆಜಾದಿ ಕಾ ಅಮೃತ್‌ ಮಹೋತ್ಸವ್‌’ ನ ಸುಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 03 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿಗಳಾದ ಸುಮಂತ್‌ ಶೆಟ್ಟಿ ಮತ್ತು ನಿಹಾರ್‌ […]

ತೋಟಗಾರಿಕೆ ಇಲಾಖೆಯ ವತಿಯಿಂದ ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳ ಮಾರಾಟ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಹಾಗೂ ಸಾರ್ವನಿಕರ ಬೇಡಿಕೆಗನುಗುಣವಾಗಿ ವಿವಿಧ ತೋಟಗಾರಿಕೆ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ನಿಂಬೆ, ಕರಿಬೇವು ಹಾಗೂ ತೆಂಗಿನ ಸಸಿಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ […]

ಉಡುಪಿ ಅಂಚೆ ವಿಭಾಗದ ಅಂಚೆ ಕಚೇರಿಗಳಲ್ಲಿ ರೆವಿನ್ಯೂ ಸ್ಟ್ಯಾಂಪ್‌ಗಳು ಲಭ್ಯ

ಉಡುಪಿ: ಅಂಚೆ ಇಲಾಖೆಯ ವತಿಯಿಂದ ಸಾರ್ವಜನಿಕರ ಉಪಯೋಗಕ್ಕೆ ಅಗತ್ಯವಿರುವ ರೆವಿನ್ಯೂ ಸ್ಟ್ಯಾಂಪ್‌ಗಳು ಉಡುಪಿ ಅಂಚೆ ವಿಭಾಗದ ಎಲ್ಲಾ ಅಂಚೆ ಕಚೇರಿಗಳಲ್ಲಿ ಖರೀದಿಗೆ ಲಭ್ಯವಿರುವುದಾಗಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.