ಬನ್ನಂಜೆ: ಸಾಂತ್ವನ ಮಹಿಳಾ ಸಹಾಯವಾಣಿ ಯೋಜನೆ ಕಾರ್ಯಾರಂಭ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಸಾಂತ್ವನ ಮಹಿಳಾ ಸಹಾಯವಾಣಿ ಯೋಜನೆಯು ಕಾರ್ಯಾರಂಭಗೊಂಡಿದ್ದು, ಪ್ರಸ್ತುತ ನಗರದ ಬನ್ನಂಜೆ ಹಳೇ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತದೆ. ಈ ಯೋಜನೆಯಡಿ ಮಹಿಳೆಯರ ಮೇಲಾಗುವ ದೌರ್ಜನ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಆಪ್ತಸಮಾಲೋಚನೆ ಹಾಗೂ ಕಾನೂನು ಸಲಹೆಗಳ ಮೂಲಕ ಬಗೆಹರಿಸಲಾಗುವುದು. ಸದ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಉಡುಪಿ ರಾಷ್ಟ್ರೀಯ ಹೆದ್ದಾರಿಗಳು ಮಾಯ! ಹೊಂಡದಲ್ಲಿ ರಸ್ತೆಯೋ ರಸ್ತೆಯಲ್ಲಿ ಹೊಂಡವೋ? ಪ್ರಯಾಣಿಕರಲ್ಲಿ ಗಲಿಬಿಲಿ!

ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು ಮಲ್ಪೆ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗ ಸಂಪೂರ್ಣ ಹೊಂಡಗಳದ್ದೇ ಕಾರುಬಾರು. ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗಿರುವ ಹೆದ್ದಾರಿಗಳು ಮರಣ ಮೃದಂಗ ಬಾರಿಸುತ್ತಿವೆ. ಹೆದ್ದಾರಿಗಳಲ್ಲಿ ನಿರ್ಮಾಣವಾಗಿರುವ ಆಳತ್ತೆರದ ಗುಂಡಿಯಲ್ಲಿ ಬಿದ್ದು, ಪ್ರಾಣ ಕಳೆದುಕೊಂಡ, ಕೈ ಕಾಲು ಮುರಿದುಕೊಂಡ ಘಟನೆಗಳು ಹಲವಾರು ನಡೆದಿವೆ. ಸುರತ್ಕಲ್ -ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಚಿಂತಾಜನಕವಾಗಿದೆ. ಇಲ್ಲಿ ರಸ್ತೆಯಲ್ಲಿ ಗುಂಡಿಯೋ, ಗುಂಡಿಯೊಳಗೆ ರಸ್ತೆಯೋ ಎಂದು ಪ್ರಯಾಣಿಕರು ಗಲಿಬಿಲಿಗೊಂಡು ಪ್ರಾಣ ಕೈಯಲ್ಲಿ […]

ದೇವನಹಳ್ಳಿಯ ತ್ಯಾಜ್ಯ ಸಂಸ್ಕರಣ ಘಟಕ ಮಾದರಿಯಿಂದ ಇಂದ್ರಾಣಿ ನದಿ ರಕ್ಷಣೆ: ವಿಜಯ್ ಕೊಡವೂರು

ಉಡುಪಿ: ದೇವನಹಳ್ಳಿ ಪುರಸಭಾ ವ್ಯಾಪ್ತಿಯಲ್ಲಿ 40,000 ಜನಸಂಖ್ಯೆ ಇರುವ 7100 ಮನೆಗಳನ್ನು ಹೊಂದಿರುವಂತಹ ಪ್ರದೇಶದ ನಾಗರಿಕರಿಗೆ ಅರ್ಧ ಎಕರೆ ಜಾಗದಲ್ಲಿ ಮಲತ್ಯಾಜ್ಯ ಸಂಸ್ಕರಣ ಘಟಕದಿಂದ ಉತ್ತಮವಾದ ವ್ಯವಸ್ಥೆಯನ್ನು ಮಾಡಲಾಗಿದೆ. ಇಲ್ಲಿ ಯಾವುದೇ ರೀತಿಯ ಕೊಳಕು ವಾಸನೆ ಇಲ್ಲ. ಮಲ ತ್ಯಾಜ್ಯದ ನೀರಿನ ಅಂಶವನ್ನು ತೋಡಿಗೆ ಅಥವಾ ನದಿಗೆ ಬಿಡಲಾಗುವುದಿಲ್ಲ ಬದಲಿಗೆ ಮಲವನ್ನು ಕೇಕ್ ರೂಪದಲ್ಲಿ ಹಸಿ ಕಸದ ಜೊತೆಯಲ್ಲಿ ಗೊಬ್ಬರವನ್ನಾಗಿ ಮಾಡಿ ಅಲ್ಲಿಯ ಕೃಷಿಕರಿಗೆ ಮಾರಾಟ ಮಾಡುವಂತಹ ಪದ್ಧತಿ ನಡೆಯುತ್ತಿದೆ. ಪರಿಸರಕ್ಕೆ ಯಾವುದೇ ತೊಂದರೆ ಇಲ್ಲ, ನೀರಿನ […]

ಸಿಟಿ ಬಸ್ ನಿಲ್ದಾಣ ವೃತ್ತಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ: ಆಕ್ಷೇಪಣೆ ಆಹ್ವಾನ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣದಿಂದ ನರ್ಮ್ ಬಸ್‌ ಸ್ಟ್ಯಾಂಡ್ ಬಳಿಯಿಂದ ಸರ್ವೀಸ್ ಬಸ್ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿರುವ ವೃತ್ತಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ಎಂದು ನಾಮಕರಣ ಮಾಡುವ ಕುರಿತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಇವರು ಮನವಿ ಸಲ್ಲಿಸಿದ್ದು, ಈ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ ಸಾರ್ವಜನಿಕರು 30 ದಿನಗಳ ಒಳಗೆ ನಗರಸಭೆ ಕಚೇರಿಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ವೆಬ್ ಸೀರೀಸ್ ಸಾಕು, ಸಿನಿಮಾ ಬೇಡ, ಮಿಸ್ ವರ್ಲ್ಡ್ ಕಿರೀಟ ಬೇಕು: ಮಿಸ್ ಇಂಡಿಯಾ ಸಿನಿ ಶೆಟ್ಟಿ

ಉಡುಪಿ: ಮಿಸ್‌ ಇಂಡಿಯಾ ಆಗಿ ಆಯ್ಕೆಯಾದ ನಂತರ ಸೋಮವಾರ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಸಿನಿ ಶೆಟ್ಟಿ ಅವರನ್ನು ಬಂಟರ ಸಂಘದ ವತಿಯಿಂದ ಅಲಂಕೃತಗೊಂಡ ತೆರೆದ ವಾಹನದಲ್ಲಿ ಚೆಂಡೆ, ಕೊಂಬು, ವಾದ್ಯಘೋಷಗಳೊಂದಿಗೆ ಮೆರವಣಿಗೆಯೊಂದಿಗೆ ಸ್ವಾಗತಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿನಿ ಶೆಟ್ಟಿ, ವೆಬ್‌ ಸೀರೀಸ್‌ಗಳಲ್ಲಿ ನಟಿಸಿರುವುದರಿಂದ ನಟನೆಯ ಅನುಭವ ಇದೆ. ಸದ್ಯ ಸಿನಿಮಾದಲ್ಲಿ ನಟಿಸುವ ಗುರಿ ಇಲ್ಲ. ನನ್ನ ಮುಂದಿನ ಕನಸು ಮಿಸ್ ವರ್ಲ್ಡ್ ಕಿರೀಟವನ್ನು ಮುಡಿಗೇರಿಸಿಕೊಳ್ಳುವುದು ಎಂದಿದ್ದಾರೆ. ತುಳು ನನ್ನ ಮಾತೃ ಭಾಷೆ, ತುಳುವಿನಲ್ಲಿ […]