ಮತಗಟ್ಟೆಗಳ ಸುತ್ತ ಪ್ರತಿಬಂಧಕಾಜ್ಞೆ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ […]
ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಜೊತೆ ಭಾಗಿಯಾದ ಕೇಂದ್ರ ಸಚಿವ-ಸಂಸದರು

ಉಡುಪಿ: ಇಲ್ಲಿನ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಪರವಾಗಿ ಉಡುಪಿ ಸಂತೆಕಟ್ಟೆಯಲ್ಲಿ ಆಯೋಜಿಸಿದ್ದ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಬಿ ಎಲ್ ವರ್ಮಾ, ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ, ಕೆ ರಘುಪತಿ ಭಟ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಶ್ರೀಮತಿ ವೀಣಾ ನಾಯ್ಕ್, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಮತಯಾಚನೆ ಮಾಡಿದರು.
ಉಡುಪಿ: ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸೋಮವಾರದಂದು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಪಾಲ್ಗೊಂಡು ನಂತರ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಹಮ್ಮಿಕೊಂಡ ಸಭೆಯನ್ನುದ್ದೇಶಿಸಿ ಮಾತನಾಡಿದರು. ಉಡುಪಿ ಸಿಟಿ ಬಸ್ ಸ್ಟಾಂಡ್ ನಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದವರೆಗೆ ಬೃಹತ್ ಪಾದಯಾತ್ರೆಯಲ್ಲಿ ಭಾಗಿಯಾದರು. ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಮಲ್ಪೆ ಬಂದರಿನಲ್ಲಿ 75 ಮೀನುಗಾರರು ಕಾಲುಜಾರಿ ಸಾವನ್ನಪ್ಪಿದ್ದಾರೆ. ಬಿಜೆಪಿಗರು ಈ ಕುರಿತು ತಲೆಕೆಡಿಸಿಕೊಂಡಿಲ್ಲ. […]
ಬಿಜೆಪಿ ಗೆಲುವಿಗೆ ಮತದಾರರಿಂದಲೇ ಸಂಕಲ್ಪ: ಯಶ್ ಪಾಲ್ ಸುವರ್ಣ

ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕ್ಷೇತ್ರದ ಮತದಾರಾರರೇ ಸಂಕಲ್ಪ ಮಾಡಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾರರ ಆಶೀರ್ವಾದ ಮತ್ತು ಕಾರ್ಯಕರ್ತರ ಪರಿಶ್ರಮದಿಂದ ಪ್ರಚಂಡ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು. ಉಡುಪಿ ನಗರ ಸಭೆಯ ವಿವಿಧ ವಾರ್ಡ್ ಗಳಲ್ಲಿ ಮಹಾ ಅಭಿಯಾನದ ಅಂಗವಾಗಿ ರಘುಪತಿ ಭಟ್, ನಗರ ಸಭಾ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮನೆ […]
ಡಾ.ವಿ.ಎಸ್ ಆಚಾರ್ಯರ ಮಾದರಿ ಉಡುಪಿ ಕ್ಷೇತ್ರದ ಕನಸನ್ನು ನನಸಾಗಿಸುವ ಗುರಿ: ಯಶ್ ಪಾಲ್ ಸುವರ್ಣ

ಉಡುಪಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಯಶ್ ಪಾಲ ಸುವರ್ಣ ಇಂದು ಕಳ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಲೋನಿಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಮತ ಯಾಚನೆ ಮಾಡಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಡುಪಿಯನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದು. ಡಾ.ವಿ ಎಸ್ ಆಚಾರ್ಯರವರ ಅಭಿವೃದ್ಧಿಯ ಕನಸನ್ನು ನನಸು ಮಾಡಿ ಉಡುಪಿಯನ್ನು 224 ಕ್ಷೇತ್ರಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದರು. ಕಳೆದ ಕೆಲವು ವರ್ಷಗಳಿಂದ ರಘುಪತಿ ಭಟ್ ಉಡುಪಿಯ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವರ […]