ಫಲಾಪೇಕ್ಷೆ ಇಲ್ಲದೆ ಸಮಾಜ ಸೇವೆ ಮಾಡಿ: ಉಡುಪಿ ಜಿಲ್ಲಾಧಿಕಾರಿ
ಉಡುಪಿ: ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜ ಸೇವೆ ಮಾಡಿದರೆ ಅಂತಹ ಕೆಲಸ ವೈಯಕ್ತಿಕ ಮತ್ತು ವ್ಯಕ್ತಿತ್ವ ಅಭಿವೃದ್ಧಿಗೆ ಸ್ವಯಂ ಪ್ರೇರಣೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದರು. ಅವರು ಶನಿವಾರ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಅಂಬಲಪಾಡಿಯ ಪ್ರಗತಿ ಸೌಧದಲ್ಲಿ ನಡೆದ ರಾಜ್ಯ ಮಟ್ಟದ ಯೂತ್ ರೆಡ್‍ಕ್ರಾಸ್ ಸಂಸ್ಥೆ ಬೇಸಿಕ್ ಓರಿಯೆಂಟೇಶನ್ ಮತ್ತು ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. […]