ಉಡುಪಿ: 75ನೇ ಸ್ವಾತಂತ್ರ್ಯ ದಿನಾಚರಣೆ; ಕಾಂಗ್ರೆಸ್ ನಿಂದ ಪಾದಯಾತ್ರೆ
ಉಡುಪಿ: 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು. ಉಡುಪಿ ಕಾಂಗ್ರೆಸ್ ಭವನದಿಂದ ಆರಂಭಗೊಂಡ ಪಾದಯಾತ್ರೆ ಬ್ರಹ್ಮಗಿರಿ-ಆಸ್ಪತ್ರೆ ರಸ್ತೆ, ಜೋಡುಕಟ್ಟೆ- ಕೋರ್ಟ್ ರಸ್ತೆ – ಕೆ.ಎಂ. ಮಾರ್ಗದ ಮೂಲಕ ಸರ್ವಿಸ್ ಬಸ್ ಸ್ಟ್ಯಾಂಡ್ ಕ್ಲಾಕ್ ಟವರ್, ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಖಾಂತರ ಸಮಾಪನಗೊಂಡಿತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, […]