ಉಡುಪಿ: 9ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: 9ನೇ ತರಗತಿಯ ಶಾಲಾ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉಡುಪಿಯ ಬನ್ನಂಜೆ ಗರಡಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ದೀಪಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಬಾಲಕಿಯ ಕುಟುಂಬ ಉಡುಪಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಈಕೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದೇ ಖಿನ್ನತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ನಗರ ಪೊಲೀಸ್ ಠಾಣೆ ನಿರೀಕ್ಷಕ ಪ್ರಮೋದ್ […]