ಉಡುಪಿ: ಉದ್ಯಮಿಯನ್ನು ಅಪಹರಿಸಿ ಲಕ್ಷಾಂತರ ರೂಪಾಯಿ ಸುಲಿಗೆಗೈದ ಪ್ರಕರಣ; ಮೂವರು ಆರೋಪಿಗಳ ಬಂಧನ

ಉಡುಪಿ: ಜುಲೈ 16ರಂದು ನಗರದಲ್ಲಿ ನಡೆದ ಉದ್ಯಮಿಯನ್ನು ಅಪಹರಿಸಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಕಟಪಾಡಿ ಜಂಕ್ಷನ್ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಂದಳಿಕೆಯ ಸಂತೋಷ್ ಬೋವಿ, ಕಾರ್ಕಳ ನಿಟ್ಟೆಯ ಅನಿಲ್ ಪೂಜಾರಿ ಹಾಗೂ ಸಾಸ್ತಾನ ಕೊಡಿಯ ಮಣಿ ಯಾನೆ ಮಣಿಕಂಠ ಖಾರ್ವಿ ಎಂದು ಗುರುತಿಸಲಾಗಿದೆ. ಮಣಿಕಂಠ ಖಾರ್ವಿ ಪ್ರಕರಣದ ಹಿನ್ನೆಲೆ: ಈ ಮೂವರು ಅಪಹರಣಕಾರರು ಜುಲೈ 16ರಂದು ನಗರದಲ್ಲಿ ಷೇರು ವ್ಯವಹಾರ ನಡೆಸುತ್ತಿದ್ದ ತುಮಕೂರು ಮೂಲದ ಅಶೋಕ್ […]