ಉಡುಪಿ: ನಾಪತ್ತೆಯಾಗಿದ್ದ ಸಂತೆಕಟ್ಟೆ ನಿವಾಸಿ ಶವವಾಗಿ ಪತ್ತೆ.!

ಉಡುಪಿ: ಎರಡು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಬ್ರಹ್ಮಾವರದ ಬೈಕಾಡಿ ಗ್ರಾಮದ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ ಮಯ್ಯ (60) ಮೃತದೇಹ ಇಂದು ಬೆಳಿಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಉಪ್ಪೂರು ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಮೃತದೇಹವನ್ನು ಮೇಲೆತ್ತಿದ್ದಾರೆ.‌ ಮೃತದೇಹವನ್ನು ಶ್ರೀಧರ ಮಯ್ಯ ಅವರದೆಂದು  ಅವರ ಪತ್ನಿ ಹಾಗೂ ಪುತ್ರಿ ಗುರುತಿಸಿದ್ದಾರೆ ಎಂದು ಪೊಲೀಸರು […]