ಉಡುಪಿ: ಪ್ರೇಯಸಿಗೆ ಚೂರಿಯಿಂದ ಇರಿದು ಕೊಲೆಗೈದಿದ್ದ ಪ್ರಿಯಕರ ಸಾವು
ಉಡುಪಿ: ಪ್ರೇಯಸಿಗೆ ಚೂರಿಯಿಂದ ಇರಿದು ಕೊಲೆಗೈದು ಬಳಿಕ ಅದೇ ಚೂರಿಯಿಂದ ಕತ್ತು ಕೊಯ್ದುಕೊಂಡಿದ್ದ ಪ್ರಿಯಕರ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತ ಆರೋಪಿ ಪ್ರಿಯಕರನನ್ನು ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಐಡಿಯಲ್ ಮೆಡಿಕಲ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು. ಈತ ನಿನ್ನೆ ಮೃತಪಟ್ಟ ಸೌಮಶ್ರೀಯನ್ನು ಕಳೆದ ಏಳೆಂಟು ವರ್ಷಗಳಿಂದ ಪ್ರೀತಿಸುತ್ತಿದ್ದನು ಎನ್ನಲಾಗಿದೆ. ಆದರೆ ಆಕೆಗೆ ಕೆಲ ದಿನಗಳ ಹಿಂದೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತು. […]