ಉಡುಪಿ: ನವವಿವಾಹಿತ ಮಹಿಳೆ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ನಿವಾಸಿ ಸುನೀತಾ (21) ಎಂಬುವವರು ಮಾರ್ಚ್ 23 ರಿಂದ ಕಾಣೆಯಾಗಿದ್ದಾರೆ. ಚಹರೆ: 4 ಅಡಿ 6 ಇಂಚು ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.