ಉಡುಪಿ: ದೊಡ್ಡಣಗುಡ್ಡೆಯ ನಿವಾಸಿ ನಾಪತ್ತೆ

ಉಡುಪಿ: ಉಡುಪಿ ದೊಡ್ಡಣಗುಡ್ಡೆ ಕರಂಬಳ್ಳಿಯ 5ನೇ ರಸ್ತೆಯ ನಿವಾಸಿ ಸತೀಶ್ ಕುಮಾರ್ (54) ನಾಪತ್ತೆಯಾಗಿದ್ದು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜುಲೈ 28ರ ಸಂಜೆ 4 ಗಂಟೆಯಿಂದ ಮನೆಯಿಂದ ಹೊರಗಡೆ ಹೋದವರು ಈವರೆಗೂ ಮನೆಗೆ ವಾಪಸ್ಸು ಬಂದಿಲ್ಲ. ಸಂಬಂಧಿಕರು ಹಾಗೂ ಸ್ನೇಹಿತರು ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.