ಉಡುಪಿ: ಬಿಜೆಪಿ ಕಡಿಯಾಳಿ ಮಹಾಶಕ್ತಿ ಕೇಂದ್ರದಿಂದ ವೃಕ್ಷಾರೋಪಣ ಕಾರ್ಯಕ್ರಮ
ಉಡುಪಿ: ಬಿಜೆಪಿ ನಗರ ಮಹಿಳಾ ಮೋರ್ಚಾದ ಕಡಿಯಾಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಕಡಿಯಾಳಿಯ ಕಮಲ ಬಾಯಿ ಹೈಸ್ಕೂಲ್ ನಲ್ಲಿ ಇಂದು ವೃಕ್ಷಾರೋಪಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ಟೆಂಗಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ , ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಕಡಿಯಾಳಿ ಮಹಿಳಾ ಮೋರ್ಚಾದ ಮಹಾಶಕ್ತಿ ಕೇಂದ್ರದ […]