ಉಡುಪಿ: ಯುವಕ ನೇಣಿಗೆ ಶರಣು
ಉಡುಪಿ: ಇಲ್ಲಿನ ಮೂಡುಬೆಟ್ಟು ನಿವಾಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೂಡುಬೆಟ್ಟು ನಿವಾಸಿ ಮಿಥುನ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದ ಮಿಥುನ್, ಸ್ವಲ್ಪ ಹೊತ್ತು ಕೆಲಸ ಮಾಡಿ ಮನೆಗೆ ಮರಳಿದ್ದಾನೆ. ಮನೆಗೆ ಬಂದ ಆತ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದನು. ಸ್ವಲ್ಪ ಸಮಯದ ಬಳಿಕ ಮನೆಯವರು ನೋಡದಾಗ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ […]