ಉಡುಪಿ: ಯುವತಿಗೆ ಚೂರಿ ಇರಿದು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕ; ಇಬ್ಬರ ಸ್ಥಿತಿ ಗಂಭೀರ

ಉಡುಪಿ: ಉಡುಪಿ ಹೊರವಲಯದ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದೆ. ಯುವತಿ ಸ್ಕೂಟರ್‌ನಲ್ಲಿ ಆಗಮಿಸಿದ್ದರೆ ಯುವಕ ಬೈಕಿನಲ್ಲಿ ಬಂದಿದ್ದ ಎನ್ನಲಾಗಿದೆ. ಬಳಿಕ ಯುವಕ ತನ್ನಲ್ಲಿದ್ದ ಚೂರಿಯಿಂದ ಯುವತಿಗೆ ಇರಿದು ಬಳಿಕ ತಾನು ಅಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಚೂರಿ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಸ್ತೆ ಬದಿ ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ […]