ಉಡುಪಿ: ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಆಧಾರ್ ಕಡ್ಡಾಯ

ಉಡುಪಿ: ಕೇರಳ ಹಾಗೂ ಮಹಾರಾಷ್ಟ್ರದ ಭಕ್ತರನ್ನು ಗುರುತಿಸುವ ಸಲುವಾಗಿ‌ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಎಸ್‌ಪಿಬಿ ಮಹೇಶ್ ತಿಳಿಸಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಭಕ್ತರು ಕಡ್ಡಾಯವಾಗಿ 72 ಗಂಟೆ ಮೀರದ ಕೋವಿಡ್‌ ಆರ್‌ಟಿಪಿಸಿಆರ್‌ ನೆಗೆಟಿವ್ ವರದಿ ಸಲ್ಲಿಸಬೇಕು. ವರದಿ ಇಲ್ಲದ ಭಕ್ತರಿಗೆ ಸ್ಥಳದಲ್ಲೇ ಕೋವಿಡ್ ಪರೀಕ್ಷೆಗೊಳಪಡಿಸಿ, 7 ದಿನ ಕ್ವಾರಂಟೈನ್‌ ಕೇಂದ್ರದಲ್ಲಿ ಇರಿಸಲಾಗುವುದು. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಮತ್ತೊಮ್ಮೆ […]