ಉಡುಪಿ:ಹವಾಮಾನ ವೈಪರಿತ್ಯಗಳ ನಿರ್ವಹಣಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಹವಾಮಾನ ಬದಲಾವಣೆಯಿಂದ ಅಕಾಲಿಕ ಮಳೆ, ತಾಪಮಾನ ಹೆಚ್ಚಳ, ಚಂಡಮಾರುತ, ಪ್ರವಾಹ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಾರ್ವಜನಿಕರ ಜೀವನೋಪಾಯ ಮತ್ತು ಆರ್ಥಿಕತೆಯನ್ನು ಬೆಂಬಲಿಸುವ ಅನೇಕ ಉತ್ಪನ್ನಗಳನ್ನು ದುರ್ಬಲಗೊಳಿಸುತ್ತದೆ. ಜೊತೆಗೆ ನೈಸರ್ಗಿಕ ಪರಿಸರ ವ್ಯವಸ್ಥೆಯ ಮೇಲೂ ಪರಿಣಾಮ ಬೀರಲಿದ್ದು, ಕೃತಕ ಬುದ್ಧಿಮತ್ತೆ ಸೇರಿದಂತೆ ಮತ್ತಿತರ ತಂತ್ರಜ್ಞಾನಗಳ ಮೂಲಕ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ಪ್ರತಿನಿತ್ಯ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ತ್ಯಾಜ್ಯಗಳ ಅಸಮರ್ಪಕ ವಿಲೇವಾರಿಯು ಪರಿಸರದೊಂದಿಗೆ ಮಾನವನ ಜೀವನಕ್ಕೆ ಹಾನಿಯುಂಟು ಮಾಡುತ್ತಿವೆ. […]