ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ

ಉಡುಪಿ: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು. ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಕೆಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಎಸ್ಕಾರ್ಟ್ ಕೊಟ್ಟಿದ್ದಾರೆ. ಪ್ರೋಟೋಕಾಲ್ ವ್ಯವಸ್ಥೆ ಮಾಡಿ ಚೆಕ್ಕಿಂಗ್ ಇಲ್ಲದೆ ಬಿಟ್ಟಿದ್ದಾರೆ. ಅಲ್ಲದೆ, ಈ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರು ಕೇಳಿ ಬರುತ್ತಿದೆ. ಮಂತ್ರಿಗಳ ಪಾತ್ರ ಇದೆ ಎನ್ನಲಾಗುತ್ತಿದೆ. […]