ಶ್ರೀ ಆದರ್ಶ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ.
ಉಡುಪಿ: ಶ್ರೀ ಆದರ್ಶ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಯೋಗ ಮಾಡುವುದರ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಯುಷ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು, ಹಲವಾರು ಯೋಗಾಸನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆದರ್ಶ ನರ್ಸಿಂಗ್ ಕಾಲೇಜು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸುದಿನ ಅವರು ಸ್ವಾಗತಿಸಿದರು.