ಉಡುಪಿ: ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಮಾಡುವಂತೆ ಅಪರ ಜಿಲ್ಲಾಧಿಕಾರಿ ಆದೇಶ
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಮೂರನೇ ಅಲೆಯ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಮಾಡುವಂತೆ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಗಾಳಿತೂರಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಹಾಗೂ ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೇ ಇರುವುದು ಕಂಡುಬಂದಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೇ, ಕೊರೋನಾ ಸಂಬಂಧಿತ ಸರಕಾರದ ಮಾರ್ಗ ಸೂಚಿಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ […]