ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ.ಮಹಾಂತೇಶ ಶಿವಯೋಗಿಗಳ ಕೊಡುಗೆ ಅಪಾರ:ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್
ಉಡುಪಿ: ಮಾದಕ ವ್ಯಸನಗಳ ಸೇವನೆಯಿಂದಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವುಮೂಡಿಸುವುದರೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ.ಮಹಾಂತೇಶ ಶಿವಯೋಗಿಗಳು ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಇಂದು ನಗರದ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್‌ನ ಪ್ರಜ್ಞಾ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್ ಉಡುಪಿ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ […]