ಮೌಲ್ಯಯುತವಾದ ಆಧಾರ್ ಕಾರ್ಡ್ ಅನ್ನು ಹೊಂದುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿನ ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ. ಹೊಸ ನೋಂದಣಿ, ಮರು ನೋಂದಣಿ ಹಾಗೂ ಬಯೋ ಮೆಟ್ರಿಕ್ ನೀಡಿ, ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು […]