ಕೃಷಿಕರ ಸಮಸ್ಯೆ ಬಗ್ಗೆ ಸರಕಾರ ನಿರ್ಲಕ್ಷ್ಯ; ಜಿಲ್ಲಾ ಕೃಷಿಕ ಸಂಘದಿಂದ ಪ್ರತಿಭಟನೆ

ಉಡುಪಿ: ಜಿಲ್ಲೆಯ ಕೃಷಿಕರು ಎದುರಿಸುತ್ತಿರುವ ಸಂಕಷ್ಟ, ಸಮಸ್ಯೆಗಳ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆಯ ವಿರುದ್ಧ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ರೈತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ರೈತರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ದಿಕ್ಕಾರ ಕೂಗಿದರು. ಕೃಷಿ ಉತ್ಪನ್ನಗಳ ಮುಕ್ತ ಆಮದು ನೀತಿ ಯೋಜನೆಗಳನ್ನು ಶಾಶ್ವತವಾಗಿ ಕೈಬಿಡಬೇಕು. ಕೃಷಿ ಯಂತ್ರೋಪಕರಣಗಳ ಖರೀದಿಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಗಟ್ಟಬೇಕು. ಕೃಷಿ ಪಿಂಚಣಿ ಯೋಜನೆಯನ್ನು […]