ಉಡುಪಿ:ಮದ್ಯವ್ಯಸನಿ ನಾಪತ್ತೆ

ಉಡುಪಿ: ಕುಡಿತದ ಅಭ್ಯಾಸ ಹೊಂದಿದ್ದ ಬ್ರಹ್ಮಾವರ ತಾಲೂಕು ಸಾಸ್ತಾನದ ಗುಂಡ್ಮಿ ನಿವಾಸಿ ರವಿಕುಮಾರ್ (60)ಎಂಬ ವ್ಯಕ್ತಿಯು ಮಾರ್ಚ್ 22 ರಂದು ಸಂಜೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಸಾಧಾರಣ ಶರೀರ, ಕೋಲು ಮುಖ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, […]