ಅಲೆವೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಉಡುಪಿ: ನೆಹರೂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಅಲೆವೂರು, ಹೃದಯಮ್ ಫೌಂಡೇಷನ್ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲದ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಲೆವೂರಿನ ಸಿಎ ಬ್ಯಾಂಕ್‌ನ ಸಮೃದ್ಧಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಹೃದಯಮ್ ಫೌಂಡೇಷನ್‌ನ ಪ್ರವರ್ತಕ ಸುಭಾಷ್ ಸಾಲಿಯಾನ್ ಅವರು, ಜನರು ತಮ್ಮ ಆರೋಗ್ಯ ತಪಾಸಣೆ ನಡೆಸಲು ಅಸಡ್ಡೆ ತೋರಬಾರದು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದರಿಂದ ಉತ್ತಮ‌ ಆರೋಗ್ಯ ಕಾಪಾಡಿಕೊಳ್ಳಬಹುದು‌. ಸಂಘ […]