ಅ. 24ರಿಂದ 26ರ ವರೆಗೆ ಉಡುಪಿ ಶ್ರೀಕೃಷ್ಣಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ
ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.ಉಡುಪಿ ಕೃಷ್ಣಮಠದ ಗೀತಾಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ವಿದೇಶಗಳ ಸುಮಾರು 2000ಕ್ಕೂ ಅಧಿಕ ವಿದ್ವಾಂಸರು ಸಮ್ಮೇಳನದಲ್ಲಿ […]