ಉಡುಪಿ: ನಕಲಿ ದಾಖಲೆ ಸಲ್ಲಿಸಿ ಸಾಲ ಪಡೆದ ಆರೋಪ; ಕಿಶನ್ ಹೆಗ್ಡೆ ವಿರುದ್ಧ ದೂರು ದಾಖಲು
ಉಡುಪಿ: ಸಮರ್ಪಕವಾದ ದಾಖಲೆಗಳನ್ನು ಸಲ್ಲಿಸದೆ, ಬೇನಾಮಿ ಹೆಸರಿನಲ್ಲಿ ಸಾಲ ಪಡೆದ ಆರೋಪಿಗಳಿಬ್ಬರು ಉಡುಪಿಯ ಪ್ರಾಥಮಿಕ ಸಹಕಾರಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗೆ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದರಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕ ಮತ್ತು ಮಾಜಿ ಅಧ್ಯಕ್ಷ ಕಿಶನ್ ಹೆಗ್ಡೆ ಅವರು ಸರಿಯಾದ ದಾಖಲೆಗಳನ್ನು ಸಲ್ಲಿಸದೆ ಕೃಷಿಕನ ಹೆಸರಿನಲ್ಲಿ ಸಾಲ ಪಡೆದುಕೊಂಡಿದ್ದು, ಅದರ ಸಬ್ಸಿಡಿ ಹಣವನ್ನು ಸ್ವಂತಕ್ಕೆ ಬಳಸಿಕೊಂಡು ಬ್ಯಾಂಕ್ ಗೆ ಮೋಸ ಮಾಡಿದ್ದಾರೆ. […]