ಉಡುಪಿ: ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿ ಕಳಿಸುತ್ತೇವೆ; ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ
ಉಡುಪಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಬಾಜ್ ವಿವಾದ ತಾರಕ್ಕೇರಿದ್ದು, ಇದೀಗ ಹಿಂದೂ ಸಂಘಟನೆಗಳು ಇದರ ವಿರುದ್ಧ ಸಿಡಿದೆದ್ದಿವೆ. ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿ ಕಳಿಸುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ. ಹಿಜಾಬ್ ವಿವಾದದ ಕುರಿತು ಶುಕ್ರವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಹಿಂದೂ ಜಾಗರಣ ವೇದಿಕೆಯ ಮಂಗಳೂರು ವಿಭಾಗದ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಮತೀಯ ಬೀಜ ಬಿತ್ತಿ ಶೈಕ್ಷಣಿಕವಾಗಿ ತೊಂದರೆ ಕೊಡುವ […]