ಅಂಬಲಪಾಡಿಯಲ್ಲಿ ಮಕ್ಕಳ ರಂಗ ತರಬೇತಿ ಶಿಬಿರ ಸಂಪನ್ನ

ಉಡುಪಿ: ರಂಗಭೂಮಿ ಚಟುವಟಿಕೆಗಳಿಗೆ ಅಂಬಲಪಾಡಿ ದೇವಳದ ವತಿಯಿಂದ ಧರ್ಮದರ್ಶಿ ಅಣ್ಣಾಜಿ ಬಲ್ಲಾಳರ ಕಾಲದಿಂದಲೂ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ. ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಲು, ಸಾಮಾಜಿಕ ಮೌಲ್ಯಗಳನ್ನು ಉತ್ತೇಜಿಸಲು ಇಂತಹ ಚಟುವಟಿಕೆಗಳು ಬೇಕು. ಹೆತ್ತವರು ಇಂತಹ ರಂಗಶಿಕ್ಷಣ ಪಡೆಯಲು ಮಕ್ಕಳಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ಎನ್.ಬಿ.ವಿಜಯ ಬಲ್ಲಾಳ್ ಹೇಳಿದರು. ಅವರು ಭಾನುವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಏ.12ರಿಂದ 20ರವರೆಗೆ 12ರಿಂದ 15 ವರ್ಷದ ರಂಗಾಸಕ್ತ ಮಕ್ಕಳಿಗಾಗಿ ಖ್ಯಾತ ರಂಗ ನಿರ್ದೇಶಕ ವಿದ್ದು ಉಚ್ಚಿಲ್ […]